ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ನಾಯಕರು ಮಾಡಿದ ಟೀಕೆಗಳ ವಿವಾದದ ಹಿನ್ನೆಲೆಯಲ್ಲಿ ಭಯೋತ್ಪಾದಕ ಗುಂಪು ಅಲ್ ಖೈದಾ ಪತ್ರವನ್ನು ಬಿಡುಗಡೆ ಮಾಡಿದೆ.
“ನಮ್ಮ ಪ್ರವಾದಿಯನ್ನು ಅವಮಾನಿಸುವವರನ್ನು ನಾವು ಕೊಲ್ಲಲು ಬಯಸುತ್ತೇವೆ. ನಮ್ಮ ಪ್ರವಾದಿಯನ್ನು ಅವಮಾನಿಸುವ ಧೈರ್ಯವಿರುವವರನ್ನು ಸ್ಫೋಟಿಸಲು ನಾವು ನಮ್ಮ ದೇಹ, ನಮ್ಮ ಮಕ್ಕಳ ದೇಹಗಳೊಂದಿಗೆ ಸ್ಫೋಟಕಗಳನ್ನು ಸಿದ್ಧಪಡಿಸಿದ್ದೇವೆ. ಅಂತವರು ಈಗ ದೆಹಲಿ, ಉತ್ತರ ಪ್ರದೇಶ, ಗುಜರಾತ್ ಮತ್ತು ಮುಂಬೈನಲ್ಲಿ ತಮ್ಮ ಅಂತ್ಯಕ್ಕಾಗಿ ಕಾಯಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಹೌದು ಟಿವಿ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ವಿಶ್ವಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಪ್ರವಾದಿ ಮೊಹಮ್ಮದ್ ಅವರ ಹೇಳಿಕೆಯ ವಿವಾದದ ನಡುವೆ ಅಲ್-ಖೈದಾ ಸಂಘಟನೆ ದೆಹಲಿ, ಮುಂಬೈ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.ಜೂನ್ 6ರಂದು ಈ ಕುರಿತು ಹೇಳಿಕೆ ನೀಡಿರುವ ಅಲ್ ಖೈದಾ ಉಗ್ರ ಸಂಘಟನೆ “ಕೇಸರಿ ಭಯೋತ್ಪಾದಕರು ಈಗ ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್ನಲ್ಲಿ ತಮ್ಮ ಅಂತ್ಯವನ್ನು ಕಾಯಬೇಕು” ಎಂದು ಎಚ್ಚರಿಕೆ ನೀಡಿದೆ.
ಬಿಜೆಪಿಯ ಮಾಜಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ವಿರುದ್ಧ ಟೀಕೆ ಮಾಡಿದ ನಂತರ ಇದು ಬಂದಿದೆ. ಸದ್ಯ ಕೇಂದ್ರ ಗುಪ್ತಚರ ಸಂಸ್ಥೆಗಳು ಅಲರ್ಟ್ ಆಗಿದ್ದು, ಎಲ್ಲ ರಾಜ್ಯಗಳಿಗೂ ಬೆದರಿಕೆಯ ಕುರಿತು ಮಾಹಿತಿ ನೀಡಲಾಗಿದೆ.
PublicNext
08/06/2022 01:16 pm