ಲಕ್ನೋ: ಮೂವರು ಮುಸ್ಲಿಂ ಫಕೀರ್‌ಗಳಿಗೆ (ಧಾರ್ಮಿಕ ಪುರುಷರು) ಕೆಲವು ಸ್ಥಳೀಯರು ಬೆದರಿಕೆ ಹಾಕುತ್ತಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಉತ್ತರ ಪ್ರದೇಶದ ಗೋಂಡಾದಲ್ಲಿ ಈ ಘಟನೆ ನಡೆದಿದೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಫಕೀರರೊಬ್ಬರಿಗೆ ಕಪಾಳಮೋಕ್ಷ ಮಾಡುವುದನ್ನು ಮತ್ತು ಕ್ಷಮೆಯಾಚಿಸುವುದನ್ನು ಕಾಣಬಹುದಾಗಿದೆ. ಅಷ್ಟೇ ಅಲ್ಲದೆ 'ಜೈ ಶ್ರೀ ರಾಮ್' ಎಂದು ಜಪಿಸುವಂತೆ ಫಕೀರರಿಗೆ ಒತ್ತಡ ಹೇರಿದ್ದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
PublicNext
09/06/2022 03:45 pm