ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಇಂದು ಮತ್ತೆ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ನಡೆದಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಘಟನೆ ನಡೆದಿದ್ದು, ಮಹಿಳೆಯ ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಹ್ಮದ್ ಎಂಬಾತ ಆ್ಯಸಿಡ್ ದಾಳಿ ನಡೆಸಿರುವ ಆರೋಪಿ. ಈತ ವಿವಾಹಿತ ಮಹಿಳೆಯನ್ನ ಪ್ರೀತಿಸುತ್ತಿದ್ದ. ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಈ ವೇಳೆ ಮದುವೆಯಾಗಲು ಒಪ್ಪದಿದ್ದಾಗ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಆ್ಯಸಿಡ್ ದಾಳಿಯಿಂದ ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮಹಿಳೆಯನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಮಹಿಳೆಗೆ ಮದುವೆ ಆಗಿ ಮಗು ಇದೆ. ಹೀಗಿದ್ದರೂ ಆರೋಪಿ ಮಹಿಳೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ. ಗೋರಿಪಾಳ್ಯದ ನಿವಾಸಿಯಾಗಿರುವ ಆರೋಪಿ ಅಹ್ಮದ್, ಮಹಿಳೆ ಕೆಎಸ್ ಲೇಔಟ್ನಿಂದ ಜೆಪಿ ನಗರ ಕಡೆಗೆ ತೆರಳುತಿದ್ದಾಗ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
PublicNext
10/06/2022 12:37 pm