ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: 11 ತಿಂಗಳ ಮಗು ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ದಾವಣಗೆರೆ: 11 ತಿಂಗಳ ಮಗುವಿನ ಜೊತೆ ತಾಯಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ಪಟ್ಟಣದ ಜೆಸಿಆರ್ ಬಡಾವಣೆಯಲ್ಲಿ ನಡೆದಿದೆ.

22 ವರ್ಷದ ನಿಖಿತ ಹಾಗೂ 11 ತಿಂಗಳ ಗಂಡು ಮಗು ಅನ್ವಿಷ್ ಮೃತಪಟ್ಟ ದುರ್ದೈವಿಗಳು. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಮನೋಜ್ ಅವರು ನಿಖಿತ ಅವರ ಪತ್ನಿ. ಮನೋಜ್ ಕುಮಾರ್ ಅವರು ಕೆಲಸಕ್ಕೆಂದು ದಾವಣಗೆರೆಗೆ ಬಂದಿದ್ದಾರೆ. ಆದ್ರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅನ್ವಿಷ್ ಜೊತೆ ತಾಯಿ ನಿಖಿತ ನೇಣಿಗೆ ಕೊರಳೊಡ್ಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

Edited By : Manjunath H D
PublicNext

PublicNext

14/06/2022 05:47 pm

Cinque Terre

54.29 K

Cinque Terre

0