ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಸ್ಐ ಅಕ್ರಮ ಪ್ರಕರಣ ಸಚಿವರ ಸ್ವಗ್ರಾಮದ ಸಬ್ ಇನ್‌ಸ್ಪೆಕ್ಟರ್ ಅರೆಸ್ಟ್!

ಬೆಂಗಳೂರು: ಪಿಎಸ್ಐ ಪರೀಕ್ಷಾ ನೇಮಕಾತಿಯಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಬ್ ಇನ್‌ಸ್ಪೆಕ್ಟರ್ ನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಸಚಿವ ಅಶ್ವಥ್ ನಾರಾಯಣ್ ಸ್ವಗ್ರಾಮವಾಗಿರುವ ಮಾಗಡಿಯ ಚಿಕ್ಕಕಲ್ಯ ಗ್ರಾಮದ ಹರೀಶ್ 2019 ನೇ ಬ್ಯಾಚ್ ಪಿಎಸ್ಐ ಆಗಿದ್ದು, ಕಳೆದ‌ ಮೂರು ವರ್ಷಗಳಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಪ್ರಕರಣ ಸಂಬಂಧ ಸಿಐಡಿ ಪೊಲೀಸರು ನೀಡಿದ ದೂರಿನ‌ ಮೇರೆಗೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 14 ಮಂದಿ ಅಭ್ಯರ್ಥಿಗಳ ಪೈಕಿ ದಿಲೀಪ್ ಬಂಧನವಾಗಿತ್ತು.

ಈತ ನೀಡಿದ ಸುಳಿವಿನ ಮೇರೆಗೆ ಪಿಎಸ್ಐ ಹರೀಶ್ ನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದೀಲಿಪ್ ಚಿಕ್ಕಕಲ್ಯ ಗ್ರಾಮದವನಾಗಿದ್ದು‌ ಹಲವು ವರ್ಷಗಳಿಂದ‌ ಪಿಎಸ್ಐ ಹರೀಶ್ ಪರಿಚಿತನಾಗಿದ್ದ. ವಾಮಮಾರ್ಗದಲ್ಲಿ‌ ಪಿಎಸ್ ಐ ಆಗುವ ಸಲುವಾಗಿ ಲಕ್ಷಾಂತರ ರೂಪಾಯಿವನ್ನ ಹರೀಶ್ ನೀಡಿರುವುದಾಗಿ ಸಿಐಡಿ ಮುಂದೆ ಹೇಳಿಕೆ‌ ನೀಡಿದ್ದ. ಹರೀಶ್ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗ್ತಿದೆ.‌

ಇನ್ನೂ ಈ ಹಿಂದೆ ಕೂಡ ಪಿಎಸ್ಐ ಹರೀಶ್ ನನ್ನ ನಾಲ್ಕೈದು ಬಾರಿ ಸಿಐಡಿ ವಿಚಾರಣೆ ನಡೆಸಿದ್ರು. ಹರೀಶ್ ಕೂಡ ವಿಚಾರಣೆ ಮುಗಿದ ನಂತರ ಕೋರ್ಟ್ ನಲ್ಲಿ ರಿಟ್ ಪಿಟಿಷನ್ ಸಲ್ಲಿಸಿದ್ರು. ಸದ್ಯ ಪಿಎಸ್‌ಐ ನನ್ನ ಬಂಧಿಸಿರುವ ಸಿಐಡಿ ವಿಚಾರಣೆ ಚುರುಕುಗೊಳಿಸಿದೆ.

Edited By :
PublicNext

PublicNext

15/06/2022 12:48 pm

Cinque Terre

76.99 K

Cinque Terre

0