ರಾಯಚೂರು: ರಾಯಚೂರು ನಗರಸಭೆ ಪೂರೈಸಿದ ಕಲುಷಿತ ನೀರು ಕುಡಿದು ಸಾವನ್ನಪ್ಪಿರುವವರ ಸಂಖ್ಯೆ 7ಕ್ಕೆ ಏರಿದೆ.
ರಾಯಚೂರಿನ ವಾರ್ಡ್ ನಂಬರ್-14ರ ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ (48) ಮೃತ ದುರ್ದೈವಿ. ಕಳೆದ 15-20 ದಿನಗಳಲ್ಲಿ ರಾಯಚೂರು ನಗರಸಭೆ 7 ಬಲಿಗಳನ್ನು ಪಡೆದಿದೆ. ವಾಂತಿ ಭೇದಿ, ಕಿಡ್ನಿ ಸಮಸ್ಯೆಯಿಂದ ಶಮೀಮ್ ಬೇಗಂ ಮೇ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇನ್ನೂ ನೂರಾರು ಮಂದಿ ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅವರನ್ನ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಕಲುಷಿತ ನೀರು ಕುಡಿದು ಸಾವನ್ನಪ್ಪಿದ ಪ್ರಕರಣದ ಸಂಬಂಧ ಪರಿಶೀಲನೆಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ ನೇತೃತ್ವದ ತನಿಖಾ ತಂಡ ನೇಮಿಸಲಾಗಿತ್ತು. ನೀರಿನ ಶುದ್ಧೀಕರಣ ಹಾಗೂ ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯವಾಗಿದೆ. ಈಗಾಗಲೇ ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಸಮಿತಿ ತಿಳಿಸಿತ್ತು. ಆದರೆ ಸರ್ಕಾರ ರಚಿಸಿದ್ದ ತನಿಖಾ ಸಮಿತಿ ಬಂದು ಹೋದ ಮೇಲೂ ಪರಿಸ್ಥಿತಿ ಸರಿ ಹೋಗಿಲ್ಲ. ಸಮಿತಿ ಬಂದು ನೀರಿನ ಘಟಕವನ್ನ ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಸಭೆ ನಡೆಸಿ ಹೋಗಿದ್ರು ಅಷ್ಟೇ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.
PublicNext
16/06/2022 04:21 pm