ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರೇಮಿಗಳ ಮದುವೆಗೆ ಅಡ್ಡಿಯಾಯ್ತು ಕುಜ ದೋಷ : ಬದುಕಲಿಲ್ಲ ಯುವತಿ

ಶಿವಮೊಗ್ಗ : ಹೆತ್ತವರ ವಿರೋಧದ ಮಧ್ಯೆಯೂ ಪರಸ್ಪರ 6 ವರ್ಷದಿಂದ ಪ್ರೀತಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸುಧಾ, ಅರಣ್ಯ ಇಲಾಖೆ ಸಿಬ್ಬಂದಿ ಪ್ರವೀಣ್ ಪ್ರೀತಿಗೆ ಜ್ಯೋತಿಷಿಯ ಮಾತು ವಿಷವಾಗಿದೆ.ಹೌದು ಪೊಲೀಸ್ ಕಾನ್ಸ್ ಟೇಬಲ್ ಸುಧಾ ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿ. ತೀರ್ಥಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನುಪ್ರವೀಣ್ ಬೆಳಗಾವಿ ಮೂಲದವನು. ಭದ್ರಾವತಿ ಅರಣ್ಯ ವಲಯದಲ್ಲಿ ನೌಕರಿ ಮಾಡುತ್ತಿದ್ದ.

ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು.ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ದರಾಗಿದ್ದರು.ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು. ಆ ವೇಳೆ ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ.ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾನೆ.

ಇನ್ನು ಜ್ಯೋತಿಷಿ ಮಾತು ಕೇಳಿದ ಪ್ರವೀಣ್ ತಾಯಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೇ ಯುವತಿ ಸುಧಾಳಿಗು ಪೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು ಈ ಮದುವೆ ಸಾಧ್ಯವಿಲ್ಲ ಎಂದು ಆವಾಜ್ ಸಹ ಹಾಕಿದ್ದರಂತೆ ಇದರಿಂದ ಮನನೊಂದ ಪ್ರೇಮಿಗಳು ಮೇ.31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಗುರುವಾರ ಮಧ್ಯೆ ರಾತ್ರಿ ಸುಧಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ವಿಪರ್ಯಾಸವೆಂದರೆ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Edited By : Nirmala Aralikatti
PublicNext

PublicNext

17/06/2022 10:08 pm

Cinque Terre

59.64 K

Cinque Terre

11

ಸಂಬಂಧಿತ ಸುದ್ದಿ