ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಉದಯಪುರ ಟೈಲರ್ ಹತ್ಯೆ ಕೇಸ್‌; ಇಬ್ಬರು ಆರೋಪಿಗಳು ಅರೆಸ್ಟ್

ಜೈಪುರ: ಬಿಜೆಪಿಯ ಮಾಜಿ ವಕ್ತಾರೆ ನೂಪುರ ಶರ್ಮಾ ಹೇಳಿಕೆ ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯ್‌ಪುರದಲ್ಲಿ ಟೈಲರ್‌ನನ್ನು ಬರ್ಬರ ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವಾದಿ ಮಹಮ್ಮದ್ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಂತ ನೂಪುರ್ ಶರ್ಮಾ ಪರವಾಗಿ ಟೈಲರ್ ಕನ್ಹಯ್ಯ ಲಾಲ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳು ಹಾಡಹಗಲೇ ಕನ್ಹಯ್ಯ ಲಾಲ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅಷ್ಟೇ ಅಲ್ಲದೆ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿದ್ದರು.

ಆರೋಪಿಗಳನ್ನು ವಿಡಿಯೋ ದೃಶ್ಯಾವಳಿ ಆದರಿಸಿ, ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿಯಿದ್ದು, ಎಲ್ಲೆಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.

Edited By : Vijay Kumar
PublicNext

PublicNext

28/06/2022 09:06 pm

Cinque Terre

125.35 K

Cinque Terre

57

ಸಂಬಂಧಿತ ಸುದ್ದಿ