ಜೈಪುರ್: ರಾಜಸ್ಥಾನದ ಉದಯಪುರದಲ್ಲಿ ನಡೆದ ಶಿರಚ್ಛೇದನ ಪ್ರಕರಣವು ಈಡಿ ದೇಶದ ಜನರನ್ನೇ ಬೆಚ್ಚಿ ಬೀಳಿಸಿದೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಟೈಲರ್ ಕನ್ಹಯ್ಯಾಲಾಲ್ ಎಂಬುವರ ಶಿರಚ್ಛೇದನ ಮಾಡಿದ ಕ್ರೂರಿಗಳು ಐಎಸ್ಐ ನಂಟು ಹೊಂದಿದ್ದಾರೆ ಎನ್ನಲಾಗುತ್ತಿದೆ.
ಟೈಲರ್ ಕನ್ಹಯ್ಯಾಲಾಲ್ ಕುಟುಂಬಕ್ಕೆ ರಾಜಸ್ಥಾನ ಸರ್ಕಾರವು 31 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಅವರ ಕುಟುಂಬದ ಇಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಹುದ್ದೆಯನ್ನು ನೀಡುವುದಾಗಿ ಸರ್ಕಾರ ಹೇಳಿದೆ. ಇನ್ನು ಘಟನೆ ಕುರಿತು ತನಿಖೆ ನಡೆಸಿರುವ ಪೊಲೀಸರಿಗೆ ಈ ಇಬ್ಬರು ಕ್ರೂರಿಗಳು, ಐಎಸ್ಐ ನಂಟು ಹೊಂದಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ. ಇದರ ಹಿಂದೆ ಭಾರಿ ದೊಡ್ಡ ಉಗ್ರರ ಜಾಲ ಇರುವ ಶಂಕೆ ವ್ಯಕ್ತವಾಗಿದೆ.
PublicNext
29/06/2022 03:08 pm