ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ ಎನ್ನುವ ಅನುಮಾನ ಶುರುವಾಗಿದೆ.
ಹೌದು ಜೂನ್ 21ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ (54) ಕೊಲೆಯಾಗಿದೆ. ಇನ್ನು ಕೊಲೆಯಾಗುವ ಮುನ್ನ ಉಮೇಶ್ ನೂಪರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.
ಉಮೇಶ್ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಿದ್ದಾರೆ. ಈ ಪೈಕಿ ಮುದಾಸಿನ್ ಅಹ್ಮದ್ ಹಾಗೂ ಶಾರೂಖ್ ಪಠಾಣ್ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
02/07/2022 02:51 pm