ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಂತಿದ್ದ ಟ್ರ್ಯಾಕ್ಟರ್​​ಗೆ ಬೈಕ್​​ ಡಿಕ್ಕಿ- ಯುವಕ ಸಾವು.!

ಚಿಕ್ಕಮಗಳೂರು: ನಿಂತಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಕೆ.ಎಸ್.ಆರ್.ಟಿ.ಸಿ ಡಿಪೋ ಬಳಿ ನಡೆದಿದೆ.

ಗೋಣಿಬೀಡು ಸಮೀಪದ ಲಕ್ಷ್ಮಿಪುರ ಗ್ರಾಮದ ರಾಮುರವರ ಪುತ್ರ ರಕ್ಷಿತ್ (24) ಮೃತ ದುರ್ದೈವಿ. ರಕ್ಷಿತ್ ಬಣಕಲ್ ಕಡೆಯಿಂದ ಬೈಕಿನಲ್ಲಿ ಗೋಣಿಬೀಡು ಕಡೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಈ ಅವಘಡಕ್ಕೆ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ. ಚಾಲಕ ಟ್ರ್ಯಾಕ್ಟರನ್ನ ರಸ್ತೆ ಮಧ್ಯೆ ನಿಲ್ಲಿಸಿದ್ದರಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ರಸ್ತೆ ಮಧ್ಯೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಬೈಕ್ ಡಿಕ್ಕಿಯಾಗುತ್ತಿದ್ದಂತೆ ಯುವಕನ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ಕೂಡಲೇ ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ತಲೆಗೆ ಗಂಭೀರ ಗಾಯವಾಗಿದ್ದ ಕಾರಣ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಯುವಕ ರಕ್ಷಿತ್ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

03/07/2022 12:34 pm

Cinque Terre

56.11 K

Cinque Terre

2