ಹುಬ್ಬಳ್ಳಿ: ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಕಗ್ಗೊಲೆ ಮಾಡಲಾಗಿದೆ. ಹಾಡ ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು, ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ ರಿಸೆಪ್ಶನ್ ನಲ್ಲಿ ಹತ್ಯೆ ಮಾಡಲಾಗಿದೆ.
ಸ್ಥಳಕ್ಕೆ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
05/07/2022 01:45 pm