ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಕಬ್ಬಿನ ಹಾಲಿನ ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವು.!

ಕೋಲಾರ: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್‍ಸನ್ ಪೇಟೆಯಲ್ಲಿ ನಡೆದಿದೆ.

ಕೌಸರ್ ಬೇಗ್(37) ಮೃತ ಮಹಿಳೆ. ರಾಬರ್ಟ್‍ಸನ್ ಪೇಟೆಯ 3ನೇ ಅಡ್ಡ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿದ್ದು, ಕೌಸರ್ ಬೇಗ್ ಮಂಗಳವಾರ ಮುಂಜಾನೆ ತಮ್ಮದೆ ಕಬ್ಬಿನ ಹಾಲು ಮಾರಾಟ ಮಾಡುವ ಅಂಗಡಿಗೆ ಬಂದಿದ್ದಳು. ಈ ವೇಳೆ ಕೌಸರ್ ಬೇಗ್ ಧರಿಸಿದ್ದ ಬುರ್ಕಾ ಕಬ್ಬಿನ ಯಂತ್ರಕ್ಕೆ ಸಿಲುಕಿದೆ. ಪರಿಣಾಮ ಮಹಿಳೆ ಕೂಡ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಬರ್ಟ್‍ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Edited By : Vijay Kumar
PublicNext

PublicNext

06/07/2022 07:46 am

Cinque Terre

47.27 K

Cinque Terre

7