ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೇಷ್ಮೆ ಕೃಷಿ ವಿವಿಯಲ್ಲಿ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ

ಚಿಕ್ಕಬಳ್ಳಾಪುರ: ಬದುಕಿ ಬಾಳಬೇಕಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರು ರೇಷ್ಮೆ ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.

ಹೌದು ರೇಷ್ಮೆ ಕೃಷಿ ವಿಶ್ವ ವಿದ್ಯಾಲಯದಲ್ಲಿ ಕೃಷಿ ವಿಭಾಗದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪವಿತ್ರ.ಎಸ್ (20) ವಿವಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ತನ್ನ ಸ್ನೇಹಿತನೊಂದಿಗೆ ವಿಡಿಯೋ ಕಾಲ್ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದು, ವಿದ್ಯಾರ್ಥಿನಿಯ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.

ಇನ್ನು ಮಗಳು ಸಾವಿನ ಸುದ್ದಿ ಕೇಳಿ ಸ್ಥಳಕ್ಕೆ ಬಂದ ವಿದ್ಯಾರ್ಥಿನಿ ಪೋಷಕರು ಹಾಸ್ಟೆಲ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಸ್ಟೆಲ್ ನಲ್ಲಿ ರ್‍ಯಾಗಿಂಗ್ ನಡೆಸುತ್ತಿದ್ದ ಬಗ್ಗೆ ನಮ್ಮ ಬಳಿ ಮಗಳು ಮಾತನಾಡಿದ್ದಳು. ನಾವು ಯಾರ ತಂಟೆಗೂ ಹೋಗಬೇಡ.. ಒಬ್ಬಳೇ ಇದ್ದು ಬಿಡು ಎಂದು ಹೇಳಿದ್ದೇವು ಎಂದು ತಿಳಿಸಿದ್ದಾರೆ.

ಸದ್ಯ ವಿದ್ಯಾರ್ಥಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

08/07/2022 10:34 am

Cinque Terre

97.29 K

Cinque Terre

0

ಸಂಬಂಧಿತ ಸುದ್ದಿ