ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ವಿರುದ್ಧ ಸುಪ್ರೀಂ ಮೊರೆ ಹೋದ ಎಸಿಬಿ ಎಡಿಜಿಪಿ

ಬೆಂಗಳೂರು: ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿ ಸಂದೇಶ್ ವ್ಯಕ್ತಪಡಿಸಿದ ಅಭಿಪ್ರಾಯದ ವಿರುದ್ಧ ಸುಪ್ರೀಂಕೋರ್ಟ್​ಗೆ ಭ್ರಷ್ಟಾಚಾರ ನಿಗ್ರಹ ದಳದ ಎಡಿಜಿಪಿ ಸೀಮಂತ್​ ಕುಮಾರ್​ ಸಿಂಗ್​ ಸೋಮವಾರ (ಜುಲೈ 11) ಮೇಲ್ಮನವಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧ ನ್ಯಾಯಮೂರ್ತಿ ವ್ಯಕ್ತಪಡಿಸಿರುವ ಅಭಿಪ್ರಾಯ ತೆಗೆದು ಹಾಕಬೇಕೆಂದು ಕೋರಿ ಸೀಮಂತ್ ಕುಮಾರ್ ಸಿಂಗ್ ಅವರು ಈ ಮೊದಲು ಕರ್ನಾಟಕ ಹೈಕೋರ್ಟ್​ಗೂ ಅರ್ಜಿ ಸಲ್ಲಿಸಿದ್ದರು. ಈ ಮನವಿಯನ್ನು ಕರ್ನಾಟಕ ಹೈಕೋರ್ಟ್ ಇನ್ನೂ ವಿಚಾರಣೆಗೆ ಸ್ವೀಕರಿಸಿಲ್ಲ. ಈ ಮಧ್ಯೆ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಆ ಅರ್ಜಿಯ ತುರ್ತು ವಿಚಾರಣೆಗೆ ಸೋಮವಾರ ಬೆಳಗ್ಗೆ ಸಿಜೆಐ ಎನ್.ಎ. ರಮಣ ಅವರಿದ್ದ ನ್ಯಾಯಪೀಠದ ಎದುರು ಮನವಿ ಮಾಡಲಾಯಿತು.

ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಹಾಕುವ ಪ್ರಕರಣ, ಏನಿದು ಎಂದು ಪ್ರಶ್ನಿಸಿದರು. 'ಇದೆಲ್ಲವೂ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಇದು ಸರಿಯಲ್ಲ. ನ್ಯಾ ಎಚ್.ಪಿ.ಸಂದೇಶ್ ಅವರು ವ್ಯಕ್ತಪಡಿಸಿದ ಅಭಿಪ್ರಾಯದಿಂದ ನನ್ನ ಕಕ್ಷಿದಾರರ ಘನತೆಗೆ ಧಕ್ಕೆಯಾಗಿದೆ' ಎಂದು ಸೀಮಂತ್ ಕುಮಾರ್ ಸಿಂಗ್​ ಪರ ವಕೀಲರು ವಿವರಿಸಿದರು. ನಾಳೆ ಸೂಕ್ತ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಸುವಂತೆ ಸಿಜೆಐ ರಮಣ ಸೂಚಿಸಿದರು.

Edited By : Vijay Kumar
PublicNext

PublicNext

11/07/2022 07:16 pm

Cinque Terre

33.91 K

Cinque Terre

0