ನವದೆಹಲಿ: 59 ವರ್ಷದ ವೃದ್ಧನೊಬ್ಬ ಸುಮಾರು 12 ವರ್ಷದ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಳಿಚರಣ್ (59) ಬಂಧಿತ ಆರೋಪಿ. ಪಾಪಿ ಕಾಳಿಚರಣ್ ಪೋಷಕರಿಲ್ಲ ಸಮಯ ನೋಡಿಕೊಂಡು ಆಗಾಗ್ಗೆ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ. ಇದೇ ಸಮಯದಲ್ಲಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯರು ಘಟನೆ ಬಗ್ಗೆ ಮನೆಯವರಿಗೆ ತಿಳಿಸಿದ ನಂತರ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.'
ಬಾಲಕಿಯರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿ ಕಾಳಿಚರಣ್‌ನನ್ನು ಬಂಧಿಸಿದ್ದಾರೆ. ಸಿಐಸಿ ಆಯುಕ್ತರಾದ ದೀಪಾಲಿ ಅವರು ಇಬ್ಬರು ಮಕ್ಕಳಿಗೆ ಕೌನ್ಸಿಲಿಂಗ್ ನಡೆಸಿದ ನಂತರ ಅತ್ಯಾಚಾರ ಆಗಿರುವುದು ದೃಢಪಟ್ಟಿದೆ.
PublicNext
12/07/2022 07:46 pm