ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯ ಕತ್ತು ಸೀಳಿ ಬರ್ಬರ ಹತ್ಯೆ.!

ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಯನಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ (40) ಕೊಲೆಯಾದ ಅಂಗನವಾಡಿ ಕಾರ್ಯಕರ್ತೆ. ವೆಂಕಟಲಕ್ಷ್ಮಮ್ಮ ಚೊಕ್ಕನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು. ಕೊಲೆ ಮಾಡಿ ಚಿನ್ನಾಭರಣಗಳನ್ನ ದೋಚಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಇನ್ನೂ ನಿಕರ ಕಾರಣ ತಿಳಿದು ಬಂದಿಲ್ಲ.

Edited By : Vijay Kumar
PublicNext

PublicNext

12/07/2022 10:53 pm

Cinque Terre

40.15 K

Cinque Terre

0