ದಾವಣಗೆರೆ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 5 ಕ್ವಿಂಟಾಲ್ ಗೂ ಹೆಚ್ಚು ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿರುವ ಚನ್ನಗಿರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಜುಲೈ 14ರ ರಾತ್ರಿ 12.15ರ ಸಮಯದಲ್ಲಿ ಚನ್ನಗಿರಿ ಪಟ್ಟಣದ ಕೌಸ ಮಸೀದಿಯ ಬಳಿ ಇರುವ ಮನೆಯೊಂದರಲ್ಲಿ ಅಕ್ರಮವಾಗಿ ರಕ್ತ ಚಂದನದ ಮರದ ತುಂಡುಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತು. ಪೊಲೀಸ್ ಅಧಿಕಾರಿಗಳ ತಂಡವು ದಾಳಿ ನಡೆಸಿ ಸುಮಾರು 15.30 ಲಕ್ಷ ರೂಪಾಯಿ ಮೌಲ್ಯದ ರಕ್ತ ಚಂದನ ವಶಪಡಿಸಿಕೊಂಡಿದೆ.
ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಎಸ್ಪಿ ಆರ್. ಬಿ. ಬಸರಗಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
PublicNext
15/07/2022 05:58 pm