ಚಂಡೀಗಢ: ಕೆನಡಾ ಬಳಿಕ ಇದೀಗ ಪಂಜಾಬ್ ನಲ್ಲಿ ಸಾರ್ವಜನಿಕ ಉದ್ಯಾನವನದಲ್ಲಿದ್ದ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಪಂಜಾಬ್ ನ ರಮ್ಮನ್ ಮಂಡಿಯಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಿ ಬಳಿಕ ಪ್ರತಿಮೆಯ ಮುಖವನ್ನು ತೆಗೆದುಕೊಂಡು ಹೋಗಿದ್ದಾರೆ.
ಈ ಕುರಿತು ಸ್ಟೇಷನ್ ಹೌಸ್ ಆಫೀಸರ್ ಹರ್ಜೋತ್ ಸಿಂಗ್ ಮಾನ್ ಮಾತನಾಡಿ, ಘಟನೆ ಸಂಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯ ಮೇಲೆ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು.
PublicNext
16/07/2022 03:56 pm