ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ಮಾಡಿದ್ದು, ಸಿಆರ್‌ಪಿಎಫ್‌ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ.
ವಿನೋದ್ ಕುಮಾರ್ ಎಂಬುವವರೇ ಹುತಾತ್ಮ ಯೋಧ. ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸ್ ಬಳಿ ಇಂದು ಮಧ್ಯಾಹ್ನ ಉಗ್ರರು ಪೊಲೀಸ್ ಮತ್ತು ಸಿಆರ್‌ಪಿಎಫ್ ಪಡೆ ಮೇಲೆ ಅಪರಿಚಿತ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಎಎಸ್‌ಐ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಉಗ್ರರು ದಾಳಿ ನಡೆಸಿದ ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
PublicNext
17/07/2022 05:47 pm