ಕುಣಿಗಲ್: ಪಟ್ಟಣದ ಮದ್ದೂರು ರಸ್ತೆಯಲ್ಲಿ ಭಾನುವಾರ ಅಕ್ರಮವಾಗಿ ಹಸು ಕಡಿದು ಮಾಂಸ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 250 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ತಂಜಾವೂರು ಮೊಹಲ್ಲದ ಸೈಯದ್ ಗೌಸ್, ಚಾಂದ್ ಪಾಷ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಚರಂಡಿಯಲ್ಲಿ ರಕ್ತ ಹರಿಯುತ್ತಿರುವುದನ್ನು ಕಂಡ ಗೌಗ್ಯಾನ್ ಫೌಂಡೇಶನ್ ಸ್ವಯಂ ಸೇವಕ ಮಂಜುನಾಥ್ ನೀಡಿದ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
18/07/2022 09:28 am