ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಹನ ತಪಾಸಣೆ ವೇಳೆ ಮಹಿಳಾ ಎಸ್‌ಐ ಮೇಲೆ ವಾಹನ ಹರಿಸಿ ಹತ್ಯೆ

ರಾಂಚಿ: ಗಣಿಗಾರಿಕೆ ಮಾಫಿಯಾಗೆ ಹರಿಯಾಣದ ಪೊಲೀಸ್​ ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಿನ್ನೆ (ಮಂಗಳವಾರ) ರಾತ್ರಿ ವಾಹನ ತಪಾಸಣೆ ವೇಳೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ತೊಪ್ನೋ ಅವರನ್ನು ರಾಂಚಿಯ ಟುಪುಡಾನಾ ಔಟ್‌ಪೋಸ್ಟ್‌ನ ಉಸ್ತುವಾರಿಯಾಗಿ ನೇಮಿಸಲಾಗಿತ್ತು. ವಾಹನವೊಂದರಲ್ಲಿ ದನಗಳನ್ನು ಸಾಗಿಸುತ್ತಿರುವ ಬಗ್ಗೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಗೆ ಮಾಹಿತಿ ಬಂದಿತ್ತು. ಅವರು ಅದನ್ನು ನಿಲ್ಲಿಸಲು ಪ್ರಯತ್ನಿಸಿದಾಗ, ಚಾಲಕ ಅವರ ಮೇಲೆ ವಾಹನ ಚಲಾಯಿಸಿದ್ದು, ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹರಿಯಾಣದ ಸುರೇಂದ್ರ ಸಿಂಗ್ ಅವರು​ ತಮ್ಮ ತಂಡದೊಂದಿಗೆ ನಿನ್ನೆ (ಜುಲೈ 19) ಬೆಳಗ್ಗೆ 11:30ಕ್ಕೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ನುಹ್​ ಏರಿಯಾಗೆ ತಲುಪಿದ್ದರು. ಪೊಲೀಸ್​ ಸಿಬ್ಬಂದಿಯನ್ನು ಕಂಡ ಕೂಡಲೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಇದೇ ವೇಳೆ ದಾರಿಯಲ್ಲಿ ನಿಂತ ಅಧಿಕಾರಿ ಸುರೇಂದ್ರ ಸಿಂಗ್​ ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್​ ಚಾಲಕ ಸುರೇಂದ್ರ ಸಿಂಗ್​ ಅವರ ಮೇಲೆ ಟ್ರಕ್​ ಹರಿಸಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನಿಬ್ಬರು ರಸ್ತೆಯಿಂದ ಪಕ್ಕಕ್ಕೆ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದರು. ಘಟನೆ ಬಳಿಕ ಆರೊಪಿಗಳು ಪರಾರಿಯಾಗಿದ್ದಾರೆ.

Edited By : Vijay Kumar
PublicNext

PublicNext

20/07/2022 04:20 pm

Cinque Terre

20.16 K

Cinque Terre

1