ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಅಧಿಕ ಬಡ್ಡಿ, ಸೈಟ್ ಆಮಿಷ; ಪುಟ್ಟರಾಜ ಫೈನಾನ್ಸ್‌ ಮಾಲೀಕ ವಿಜಯ ಶಿಂಧೆ ಸೆರೆ

ಗದಗ: ಅಧಿಕ ಬಡ್ಡಿ ಹಾಗೂ ನಿವೇಶನ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಸಂಗ್ರಹಿಸಿ ಜನರಿಗೆ ಮೋಸ ಮಾಡ್ತಿದ್ದ ಆರೋಪದಲ್ಲಿ ವಿಜಯ ರಾಘವೇಂದ್ರ ಶಿಂಧೆ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ ದೇವರಾಜು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಎಸ್ ಪಿ, ನಗರದ ರಾಜೀವ್‌ ಗಾಂಧಿ ಬಡಾವಣೆ ನಿವಾಸಿ ʼಪುಟ್ಟರಾಜ ಫೈನಾನ್ಸ್‌ ಕಾರ್ಪೊರೇಶನ್‌ ʼ ಮಾಲೀಕ ವಿಜಯ ಶಿಂಧೆ ಜನರಿಗೆ ಆಮಿಷ ಒಡ್ಡಿ ಕೋಟ್ಯಂತರ ರೂ. ವಂಚಿಸಿದ್ದ. ವಂಚನೆಗೊಳಗಾದ 25 ಮಂದಿಯಿಂದ ಸುಮಾರು 5 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿದ್ದ. ಈತನಿಂದ ಮೋಸ ಹೋದವರು ಯಾರಾದರೂ ಇದ್ದಲ್ಲಿ ಮುಂದೆ ಬಂದು ದೂರು ನೀಡಬೇಕು’ ಎಂದು ಮನವಿ ಮಾಡಿದರು.

ಫೈನಾನ್ಸ್‌ನಲ್ಲಿ ಹಣ ಮತ್ತು ಚಿನ್ನವನ್ನು ಠೇವಣಿ ಇಟ್ಟರೆ ಉತ್ತಮ ಲಾಭ ನೀಡಲಾಗುವುದು ಎಂದು ನಂಬಿಸಿ 2020 ಅಕ್ಟೋಬರ್ 1ರಂದು ಸಂತೋಷ ಪ್ರಭಾಕರ ಮುಟಗಾರ ಅವರಿಂದ ವಿಜಯ ರಾಘವೇಂದ್ರ ಶಿಂಧೆ 10 ಲಕ್ಷ ರೂ. ಹಾಗೂ 407 ಗ್ರಾಂ ಚಿನ್ನವನ್ನು ತೆಗೆದುಕೊಂಡಿದ್ದ. ಆದರೆ, ಈವರೆಗೆ ಹಣವನ್ನು ಹಿಂದಿರುಗಿಸಿಲ್ಲ. ಹಣವನ್ನು ನೀಡಬೇಕೆಂದು ಕೇಳಿದರೆ ಸತಾಯಿಸಿದ್ದಾನೆ.

15 ದಿನ, ತಿಂಗಳ ನಂತರ ಕೊಡುವೆ ಎಂದು ಹೇಳಿ, ಕೊನೆಗೆ ಮರಳಿ ಕೊಡದೆ ವಂಚಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸಂತೋಷ ಮುಟಗಾರ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ತನಿಖೆಗೊಳಪಡಿಸಲಾಗಿದೆ ಎಂದು ಎಸ್ಪಿ ವಿವರಿಸಿದ್ದಾರೆ.

-ಸುರೇಶ ಲಮಾಣಿ‌, ಪಬ್ಲಿಕ್‌ ನೆಕ್ಸ್ಟ್ ಗದಗ

Edited By : Nagesh Gaonkar
PublicNext

PublicNext

20/07/2022 10:19 pm

Cinque Terre

49.46 K

Cinque Terre

2