ಮಧುಗಿರಿ : ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಫೋಟೋವನ್ನು ಅವಮಾನಿಸಿರು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು ಎನ್ನುವ ಕಾನೂನಿನ ಹಿನ್ನೆಲೆಯಲ್ಲಿ ಅಂಬೇಡ್ಕರ್ ಫೋಟೋವನ್ನು ಆಸ್ಪತ್ರೆಯಲ್ಲಿ ತರಿಸಲಾಗಿತ್ತು ಫೋಟೋ ಗೋಡೆಗೆ ನೇತು ಹಾಕದೆ ವೇಸ್ಟ್ ರೂಮ್ ನಲ್ಲಿ ಅನಾವಶ್ಯಕ ವಸ್ತುವಿನಂತೆ ಇಡಲಾಗಿದೆ. ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಅವಮಾನ ಮಾಡಿರುವ ಇಲ್ಲಿನ ಅಧಿಕಾರಿ ವರ್ಗಕ್ಕೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ಹಲವು ದಲಿತ ಪರ ಸಂಘಟನೆಗಳು ಒತ್ತಾಯಿಸಿದ್ದು ಈ ವಿಚಾರವಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
PublicNext
22/07/2022 07:36 am