ಬಳ್ಳಾರಿ: ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಗೋನಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಬಾಲಕಿ ಸಾವನ್ನಪ್ಪಿದ್ದು, 20ಕ್ಕೂ ಜನ ಅಸ್ವಸ್ಥಗೊಂಡಿದ್ದಾರೆ.
ಸುಕನ್ಯಾ (10) ಸಾವನ್ನಪ್ಪಿರುವ ಬಾಲಕಿ. ನಿನ್ನೆ (ಭಾನುವಾರ) ಸಂಜೆ ವೇಳೆ ಅಸ್ವಸ್ಥಗೊಂಡ ಬಾಲಕಿ ಸೇರಿದಂತೆ 20ಕ್ಕೂ ಜನರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಮನೆಗೆ ಬರುತ್ತಿದ್ದಂತೆಯೇ ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿದೆ. ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಬಳಿಕ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ DHO ಜನಾರ್ದನ್, "ನಿನ್ನೆ ಸಂಜೆ ವೇಳೆಗೆ ಕಲುಷಿತ ನೀರು ಕುಡಿದ ಹಿನ್ನಲೆ ಏಕಾಏಕಿ ಗ್ರಾಮದ ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣ ಆಗಿರೋದ್ರಿಂದ ಹೀಗೆ ಆಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಅಸ್ವಸ್ಥತಗೊಂಡವರನ್ನು ತೀವ್ರ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
PublicNext
25/07/2022 04:43 pm