ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

100 ಕೋಟಿ ರೂ.ಗೆ ರಾಜ್ಯಪಾಲರ ಹುದ್ದೆ, ರಾಜ್ಯಸಭಾ ಸ್ಥಾನ.!- ಬೆಳಗಾವಿ ವ್ಯಕ್ತಿ ಸೇರಿ ನಾಲ್ವರ ಬಂಧನ

ನವದೆಹಲಿ: ರಾಜ್ಯಸಭಾ ಸ್ಥಾನ ಮತ್ತು ರಾಜ್ಯಪಾಲರ ಹುದ್ದೆ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಸಿಬಿಐ ಬಹು ರಾಜ್ಯಗಳ ವಂಚಕರ ಜಾಲವನ್ನು ಭೇದಿಸಿದ್ದು, ನಾಲ್ವರನ್ನು ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಲಾತೂರ್‌ನ ಕಮಲಾಕರ್ ಪ್ರೇಮಕುಮಾರ್ ಬಂಡಗರ್, ಕರ್ನಾಟಕದ ಬೆಳಗಾವಿಯ ರವೀಂದ್ರ ವಿಠಲ್ ನಾಯಕ್ ಮತ್ತು ದೆಹಲಿ-ಎನ್‌ಸಿಆರ್ ಮೂಲದ ಮಹೇಂದ್ರ ಪಾಲ್ ಅರೋರಾ, ಅಭಿಷೇಕ್ ಬೂರಾ ಮತ್ತು ಮೊಹಮ್ಮದ್ ಐಜಾಜ್ ಖಾನ್ ಬಂಧಿತ ಆರೋಪಿಗಳು. ಶೋಧ ಕಾರ್ಯಾಚರಣೆ ವೇಳೆ ಆರೋಪಿಯೊಬ್ಬ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ.

"ಹಣ ನೀಡಿದರೆ ರಾಜ್ಯಸಭೆಯ ಸ್ಥಾನಗಳ ವ್ಯವಸ್ಥೆ, ರಾಜ್ಯಪಾಲರ ಹುದ್ದೆ, ಕೇಂದ್ರ ಸರ್ಕಾರದ ಸಚಿವಾಲಯ ಮತ್ತು ಇತರೆ ಇಲಾಖೆಗಳ ಅಡಿಯಲ್ಲಿ ಬರುವ ಸರ್ಕಾರದ ವಿವಿಧ ಸಂಸ್ಥೆಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಜನರಿಗೆ ಸುಳ್ಳು ಭರವಸೆ ನೀಡಿ ವಂಚಿಸುವ ಏಕೈಕ ಉದ್ದೇಶ ಹೊಂದಿದ್ದರು" ಎಂದು ಎಫ್ಐಆರ್‌ನಲ್ಲಿ ಸಿಬಿಐ ಉಲ್ಲೇಖಿಸಿದೆ.

Edited By : Vijay Kumar
PublicNext

PublicNext

25/07/2022 06:32 pm

Cinque Terre

105.08 K

Cinque Terre

3

ಸಂಬಂಧಿತ ಸುದ್ದಿ