ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಂದೇ ಹಗ್ಗದಲ್ಲಿ ಮೂವರು ಸಹೋದರಿಯರು ನೇಣಿಗೆ ಶರಣು.!

ಭೋಪಾಲ್: ಮೂವರು ಸಹೋದರಿಯರು ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಧ್ಯ ಪ್ರದೇಶದ ಖಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಮೃತ ಸಹೋದರಿಯರನ್ನು ಸೋನು, ಸಾವಿತ್ರಿ, ಲಲಿತಾ ಎಂದು ಗುರುತಿಸಲಾಗಿದೆ. ಖಂಡ್ವಾ ಜಿಲ್ಲೆಯ ಜಾವರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟಾಘಾಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಸಹೋದರಿಯರ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿಲ್ಲ. ಕೌಟುಂಬಿಕ ಸಮಸ್ಯೆಯ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಜವಾದ ಕಾರಣ ಬಹಿರಂಗವಾಗಲಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Edited By : Vijay Kumar
PublicNext

PublicNext

27/07/2022 10:17 pm

Cinque Terre

37 K

Cinque Terre

1