ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈಜಲು ಬಾವಿಗೆ ಇಳಿದ ಇಬ್ಬರು ಮಕ್ಕಳು ಸಾವು..!

ಕಲಬುರಗಿ: ಬಾವಿಯೊಂದರಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಶ್ರೀಶೈಲ್ ಹೀರಾಪುರೆ (13), ಲಕ್ಷ್ಮಣ್ ಮಡಿವಾಳ (12) ಮೃತ ಬಾಲಕರು.ಪಟ್ಟಣದ ಹೊರವಲಯದ ಬಾವಿಯಲ್ಲಿ ಈಜಾಡಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಈಜು ಬಾರದೇ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳು ಸಾವನ್ನು ಕಂಡು ಸ್ಥಳೀಯರು ಸಹ ಕಣ್ಣೀರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

28/07/2022 11:07 pm

Cinque Terre

56.26 K

Cinque Terre

1

ಸಂಬಂಧಿತ ಸುದ್ದಿ