ಚಾಮರಾಜನಗರ: ಮಧ್ಯಾಹ್ನ ಬಿಸಿಯೂಟ ಸೇವಿಸಿ 120ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಎಲ್ಲರನ್ನೂ ಕೂಡಲೇ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಇದೇ ಶಾಲೆಯಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು.
PublicNext
29/07/2022 06:38 pm