ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಯುವಕನನ್ನು ಕೊಚ್ಚಿ ಕೊಂದು ಕೆನಾಲ್​ನಲ್ಲಿ ತೇಲಿ ಬಿಟ್ಟ ದುಷ್ಕರ್ಮಿಗಳು.!

ಬೆಳಗಾವಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ದುಷ್ಕರ್ಮಿಗಳು ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ್ ಬಿಕೆ ಗ್ರಾಮದ ನಿವಾಸಿ ವಿಠ್ಠಲ್ ಬನ್ನೆನ್ನವರ್ (21) ಕೊಲೆಯಾದ ದುರ್ದೈವಿ. ಯುವಕ ವಿಠ್ಠಲ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು ಯಾರಿಗೂ ಅನುಮಾನ ಬಾರದಂತೆ ಯಕ್ಕಂಚಿ ಗ್ರಾಮದ ಕೆನಾಲ್​ನಲ್ಲಿ ತೇಲಿ ಬಿಟ್ಟಿದ್ದಾರೆ. ಈ ಕೊಲೆಯು ಜುಲೈ 24ರಂದು ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಕರಿಮಸೂತಿ ಕಾಲುವೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಕಾಗವಾಡ ಮೂಲದ ಇಬ್ಬರು ಆರೋಪಿಗಳನ್ನು ಐಗಳಿ ಪೊಲೀಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತಂತೆ ಐಗಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

29/07/2022 07:39 pm

Cinque Terre

44.4 K

Cinque Terre

0