ಹಾಸನ: ರೈಲಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಗುಡ್ಡೆತೆರಣ್ಯ ಗ್ರಾಮದ ಪ್ರೀತಿ (18) ಮೃತ ದುರ್ದೈವಿ. ಮೊಸಳೆಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಪ್ರೀತಿ ಸೋಮವಾರ ಕಾಲೇಜಿಗೆ ಹೋಗುವಾಗ ಹಾಸನ ತಾಲೂಕಿನ ಅಂಕಪುರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ.
ರೈಲ್ವೆ ಹಳಿ ದಾಟುತ್ತಿದ್ದ ಪ್ರೀತಿ, ಚಲಿಸುತ್ತಿದ್ದ ರೈಲಿಗೆ ಸಿಲುಕಿ ಅಲ್ಲೇ ದುರಂತ ಅಂತ್ಯ ಕಂಡಿದ್ದಾಳೆ. ಈ ಸಾವಿಗೆ ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಮೇಲ್ಸೇತುವೆ ನಿರ್ಮಾಣ ಮಾಡಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ ಎಂದು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಪ್ರೀತಿ ಸಾವಿನ ಸುದ್ದಿ ಕೇಳಿ ಸ್ಥಳಕ್ಕೆ ದೌಡಾಯಿಸಿದ ಗ್ರಾಮಸ್ಥರು ಮತ್ತು ಕುಟುಂಬಸ್ಥರು, ಇತರ ವಿದ್ಯಾರ್ಥಿಗಳು ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಹಾಸನ- ಮೈಸೂರು ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದರು.
PublicNext
01/08/2022 08:42 pm