ರಾಂಚಿ: ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿಯನ್ನು ನಾಲ್ವರು ಕೀಚಕರು ಎಳೆದೊಯ್ದು ಅತ್ಯಾಚಾರ ಎಸಗಿದ ಜಾರ್ಖಂಡ್ನ ರಾಂಚಿಯಲ್ಲಿ ನಡೆದಿದೆ.
ಫುಟ್ಬಾಲ್ ಆಟಗಾರ್ತಿಯಾಗಿದ್ದ ಬಾಲಕಿ ಒಡಿಶಾದಲ್ಲಿ ನಡೆದ ಟೂರ್ನಿಯಲ್ಲಿ ಭಾಗವಹಿಸಿದ್ದರು. ಬಳಿಕ ರೈಲು ನಿಲ್ದಾಣದಿಂದ ತಮ್ಮ ಮನೆಗೆ ಆಟೋದಲ್ಲಿ ಹೋಗುತ್ತಿದ್ದಾಗ ರಸ್ತೆ ಮಧ್ಯೆ ಬಂದ ನಾಲ್ವರು ಕೀಚಕರು ಬಲವಂತವಾಗಿ ಆಟೋ ಹತ್ತಿದ್ದಾರೆ. ಬಳಿಕ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದಕ್ಕೆ ಪ್ರತಿರೋಧ ಒಡ್ಡಿದ ಬಾಲಕಿಗೆ ಮಾರಕಾಸ್ತ್ರ ತೋರಿಸಿ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ. ಆಟೋವನ್ನು ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಬಳಿಕ ಅವರನ್ನು ಬೆಳಗ್ಗೆ ನಗರಕ್ಕೆ ಕರೆತಂದು ವಾಪಸ್ ಬಿಟ್ಟಿದ್ದಾರೆ.
ಈ ಬಗ್ಗೆ ಬಾಲಕಿ ದೂರು ನೀಡಿದ್ದು, ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
PublicNext
03/08/2022 10:57 am