ಚಿಕ್ಕಮಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ನೋಡಲು ಬಂದ ವೇಳೆ ಎರಡು ಗುಂಪಿನ ಯುವಕರು ಬಡಿಕೊಂಡು ಇಬ್ಬರು ಯುವಕರು ಗಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹಲ್ಲೆ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರದಲ್ಲಿ ಹಾಡಹಗಲೇ ಲಾಂಗು, ಮಚ್ಚುಗಳಿಂದ ನಡೆದಿದ್ದ ಯುವಕರ ಹೊಡೆದಾಟ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆಗೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಾಲ್ಕೇ ದಿನಗಳಲ್ಲಿ 6 ಆರೋಪಿಗಳನ್ನ ಬಂಧಿಸಿರೋ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳನ್ನ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜುಲೈ 28 ರಂದು ನಗರದ ಮಿಲನ ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ವೀಕ್ಷಣೆ ವೇಳೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದು ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
PublicNext
03/08/2022 01:07 pm