ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರದ ಹಾಸ್ಟೆಲ್‍ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ರಾಜಸ್ಥಾನದ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆ.!

ಕೋಲಾರ: ಕೋಲಾರದ ಹಾಸ್ಟೆಲ್‍ನಲ್ಲಿ ರಾಜಸ್ಥಾನ ಮೂಲದ ವೈದ್ಯಕೀಯ ವಿದ್ಯಾರ್ಥಿಯೋರ್ವನ ಶವ ಪತ್ತೆಯಾಗಿದೆ.

ಪ್ರದೀಪ್ ಶರ್ಮಾ ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಮೆಡಿಕಲ್ ವಿದ್ಯಾರ್ಥಿ. ಕೋಲಾರ ನಗರ ಹೊರ ವಲಯದ ಟಮಕದಲ್ಲಿರುವ ದೇವರಾಜ ಅರಸು ಮೆಡಿಕಲ್ ಕಾಲೇಜು ಹಾಸ್ಟೆಲ್‍ನಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿ ಪ್ರದೀಪ್ ಶರ್ಮಾ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹಾಸ್ಟೇಲ್ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಪ್ರದೀಪ್ ಶರ್ಮಾ ಅಂತಿಮ ವರ್ಷದ ಫಾರೆನ್ಸಿಕ್ ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದು, ನಿನ್ನೆ (ಗುರುವಾರ) ಕತ್ತು ಕೊಯ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾಗಾಗಿ ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನೋ ಅನುಮಾನ ವ್ಯಕ್ತವಾಗಿದೆ. ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

05/08/2022 07:01 am

Cinque Terre

47.97 K

Cinque Terre

0

ಸಂಬಂಧಿತ ಸುದ್ದಿ