ಗದಗ: ಮಾನಸಿಕ ಖಿನ್ನತೆಗೊಳಗಾಗಿ ಆಂಬ್ಯುಲೆನ್ಸ್ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮೌಲಾಹುಸೇನ್ ಡಂಬಳ (34) ಆತ್ಮಹತ್ಯೆ ಶರಣಾದ ಆಂಬ್ಯುಲೆನ್ಸ್ ಚಾಲಕ. ನಾಲ್ಕೈದು ತಿಂಗಳಿಂದ ಮೌಲಾಹುಸೇನ್ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಲಾಗ್ತಿದೆ. ಸುಮಾರು ಎಂಟು ವರ್ಷಗಳಿಂದ ಮುಂಡರಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ನಗು ಮಗು ಆಂಬ್ಯುಲೆನ್ಸ್ ವಾಹನದ ಚಾಲಕನಾಗಿ ಮೌಲಾಹುಸೇನ್ ಕಾರ್ಯನಿರ್ವಹಿಸುತ್ತಿದ್ದ. ಆದರೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ವಾಣಿಜ್ಯ ಸಂಕೀರ್ಣ ಮಳಿಗೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
PublicNext
05/08/2022 03:27 pm