ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್

ತುಮಕೂರು : ಅಂಗನವಾಡಿಗೆ ಹೋಗುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಗ್ರಂಥಾಲಯ ಸಹಾಯಕನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಕಾನೂನಿನಡಿ ಪ್ರಕರಣ ದಾಖಲಿಸಿದ್ದಾರೆ. ತುಮಕೂರು ತಾಲ್ಲೂಕಿನ ಹಳ್ಳಿಯೊಂದರ ಗ್ರಾಮಪಂಚಾಯ್ತಿ ಕಚೇರಿಯೊಂದರ ಬಳಿ ಈತ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದ್ದು, ಈತ ಗ್ರಂಥಾಲಯ ಸಹಾಯಕನಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ.

ಪ್ರಕರಣ ಬಯಲಾಗುತ್ತಿದ್ದಂತೆ ಗ್ರಾಮಪಂಚಾಯ್ತಿ ಪಿಡಿಒ ಹಾಗೂ ಅಧ್ಯಕ್ಷ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದು,ಪೋಷಕರ ಮೇಲೆ ಒತ್ತಡ ಹೇರಿದ್ದಾರೆ.ಇದಕ್ಕೆ ಮಣಿಯದ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.ಸದ್ಯ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂದಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Nirmala Aralikatti
PublicNext

PublicNext

10/08/2022 04:34 pm

Cinque Terre

32.47 K

Cinque Terre

2

ಸಂಬಂಧಿತ ಸುದ್ದಿ