ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಟೊಯೊಟಾ ಶೋರೂಮ್‌ಗೆ ನುಗ್ಗಿದ ದರೋಡೆಕೋರರು ಸೆಕ್ಯುರಿಟಿ ಗಾರ್ಡ್‌ಗೆ ಚಾಕುವಿನಿಂದ ಇರಿದು ಕೊಂದು, 9 ಲಕ್ಷ ನಗದು ಮತ್ತು ಲ್ಯಾಪ್‌ಟಾಪ್‌ನೊಂದಿಗೆ ಪರಾರಿಯಾಗಿದ್ದಾರೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಾಟ್ನಾದ ಮಲಸಲಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 10ರಂದು ಈ ಘಟನೆ ನಡೆದಿದೆ. ಶೋರೂಮ್‌ಗೆ ನುಗ್ಗಿದ ಒಟ್ಟು 14 ದರೋಡೆಕೋರರು 9 ಲಕ್ಷ ನಗದು ಮತ್ತು ಲ್ಯಾಪ್‌ಟಾಪ್‌ಗಳೊಂದಿಗೆ ಪರಾರಿಯಾಗಿದ್ದಾರೆ. ಇಷ್ಟೇ ಅಲ್ಲ ಇದನ್ನು ತಡೆಯಲು ಮುಂದಾದ ಸೆಕ್ಯುರಿಟಿ ಗಾರ್ಡ್‌ಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮುಸುಕುಧಾರಿ ದುಷ್ಕರ್ಮಿಗಳು ಈ ಇಡೀ ಘಟನೆಯನ್ನು ಹೇಗೆ ನಡೆಸಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ.
PublicNext
12/08/2022 05:37 pm