ಅಮೃತಸರ: ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ತನ್ನ ಐದು ವರ್ಷದ ಮಗಳನ್ನು ಕೊಂದು ಶವವನ್ನು ಎಸೆದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ.
ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಮಹಿಳೆಯು ಬಾಲಕಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯವು ಸೆರೆಯಾಗಿದೆ. ಬಾಲಕಿಯ ಶವವನ್ನು ಎಸೆದ ನಂತರ ಮಹಿಳೆಯು ತನ್ನ ಮಗಳು ನಾಪತ್ತೆಯಾಗಿದ್ದಾಳೆ ಎಂದು ರಾಜಪುರದ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಇದೇ ವೇಳೆ ಗೋಲ್ಡನ್ ಟೆಂಪಲ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
PublicNext
13/08/2022 02:45 pm