ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಸದ ಬುಟ್ಟಿಯಲ್ಲಿ ಹಾರಿದ ರಾಷ್ಟ್ರಧ್ವಜ

ತುಮಕೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ 13 ರಿಂದ 15 ರ ವರೆಗೂ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜಗಳನ್ನ ಹಾರಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.ಆದರೆ ಇಲ್ಲೊಂದು ಪಂಚಾಯ್ತಿ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿ ಅಪಮಾನವೆಸಗಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬುಕ್ಕಾ ಪಟ್ಟಣ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಆಗೌರವ ತಂದಿದ್ದು ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಸದ ಬುಟ್ಟಿಯಲ್ಲಿ ಬಾವುಟ ಹಾರಿಸಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

Edited By : Nirmala Aralikatti
PublicNext

PublicNext

13/08/2022 07:35 pm

Cinque Terre

33.69 K

Cinque Terre

2

ಸಂಬಂಧಿತ ಸುದ್ದಿ