ಲಕ್ನೋ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಇ-ರಿಕ್ಷಾ ಚಾಲಕನಿಗೆ 17 ಬಾರಿ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ತನ್ನ ಕಾರಿಗೆ ಡಿಕ್ಕಿ ಹೊಡೆದ ಆರೋಪದ ಮೇಲೆ ಮಹಿಳೆಯೊಬ್ಬರು ಇ-ರಿಕ್ಷಾ ಚಾಲಕನಿಗೆ ಸುಮಾರು 17 ಬಾರಿ ಕಪಾಳಮೋಕ್ಷ ಮಾಡಿದ್ದರು. ಶುಕ್ರವಾರ ಈ ಘಟನೆ ನಡೆದಿದ್ದು, ಮಹಿಳೆಯ ಕಾರು ಸ್ವಲ್ಪ ಜಖಂಗೊಂಡಿದ್ದರೂ ಆಕೆಗೆ ಯಾವುದೇ ಗಾಯಗಳಾಗಿರಲಿಲ್ಲ. ಒಂದೂವರೆ ನಿಮಿಷದ ವಿಡಿಯೋದಲ್ಲಿ ಮಹಿಳೆ ಹಿಂಸಾತ್ಮಕವಾಗಿ ಇ-ರಿಕ್ಷಾ ಚಾಲಕನಿಗೆ 17 ಬಾರಿ ಕಪಾಳಮೋಕ್ಷ ಮಾಡಿರುವುದನ್ನು ಕಾಣಬಹುದು. ಆಕೆ ಚಾಲಕನ ಫೋನ್ ಮತ್ತು ಸ್ವಲ್ಪ ಹಣವನ್ನು ಸಹ ತೆಗೆದುಕೊಂಡಿದ್ದಳು.
ಈ ಸಂಬಂಧ ಇ-ರಿಕ್ಷಾ ಚಾಲಕ ನೋಯ್ಡಾ 2ನೇ ಹಂತದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 504 (ಉದ್ದೇಶಪೂರ್ವಕವಾಗಿ ಅವಮಾನಿಸುವುದು ಮತ್ತು ಪ್ರಚೋದಿಸುವುದು) ಅಡಿಯಲ್ಲಿ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಮಹಿಳೆಯನ್ನು ಬಂಧಿಸಿದ್ದಾರೆ.
PublicNext
14/08/2022 04:53 pm