ಆಗ್ರಾ : ಸೆಕ್ಯುರಿಟಿ ಗಾರ್ಡ್ ಓರ್ವ ಬೀದಿ ನಾಯಿಯ ಮೇಲೆ ಹಲ್ಲೆ ಮಾಡಿದನೆಂದು ಆರೋಪಿಸಿ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿದ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.ಹೌದು ತಾನು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಮಹಿಳೆ ಈ ಸೆಕ್ಯುರಿಟಿ ಗಾರ್ಡ್ ಗೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ.
ಈ ಘಟನೆ ಭಾನುವಾರ ನಡೆದಿದೆ. ಈ ಬಗ್ಗೆ ಆಗ್ರಾ ಪೊಲೀಸರು ಮಾತನಾಡಿದ್ದು, ವಿಡಿಯೋದ ಗಂಭೀರತೆಯನ್ನು ಅರಿತುಕೊಂಡಿದ್ದೇವೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ಎಲ್ ಐಸಿ ಆಫೀಸರ್ ಕಾಲನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಸಂತ್ರಸ್ತ ಅಖಿಲೇಶ್ ಸಿಂಗ್ ಎಂಬುವರು ಮಹಿಳೆಯ ವಿರುದ್ಧ ದೂರು ನೀಡಿದ್ದಾರೆ.
PublicNext
15/08/2022 09:08 pm