ಭುವನೇಶ್ವರ: ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಟೆಕ್ಕಿಯೊಬ್ಬಳು ಬಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರಿಗೆ ಮೃತಳ ಕುಟುಂಬ ಆಕೆಯ ಬಾಯ್ ಫ್ರಂಡ್ ವಿರುದ್ಧ ಗಂಭೀರ ಆರೋಪ ಮಾಡಿದೆ.ಮೃತ ಟೆಕ್ಕಿಯನ್ನು ಶ್ವೇತಾ ಉತ್ಕಲ್ ಕುಮಾರಿ ಎಂದು ಗುರುತಿಸಲಾಗಿದೆ. ಈಕೆ ಒಡಿಶಾದ ಭದ್ರಕ್ ನಿವಾಸಿ. ಈಕೆಯ ಬಾಯ್ ಫ್ರೆಂಡ್ ಸೌಮ್ಯಜಿತ್ ಮೊಹಪಾತ್ರ ವಿರುದ್ಧ ಶ್ವೇತಾ ಕುಟುಂಬ ದೂರು ದಾಖಲಿಸಿದೆ.
ಶ್ವೇತಾ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡ ಬಳಿಕ ಆಕೆಯ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಕ್ಕೆ ಹೆದರಿ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ.ಸದ್ಯ ತನಿಖೆ ಆರಂಭಿಸಿದ ಪೊಲೀಸರಿಗೆ ಶ್ವೇತಾ ಇದ್ದ ಫ್ಲ್ಯಾಟ್ ನಲ್ಲಿ ದೊರೆತ ಶ್ವೇತಾಳ ಮೊಬೈಲ್ ಮತ್ತು ಡೈರಿಯಿಂದ ಸೌಮ್ಯಜಿತ್ ಜೊತೆಗಿನ ಆಕೆಯ ಸಂಬಂಧದ ಬಗ್ಗೆ ತಿಳಿದುಕೊಂಡಿದ್ದಾರೆ.
ಸಾವಿಗೂ ಮುನ್ನ ಶ್ವೇತಾ 15 ಬಾರಿ ಸೌಮ್ಯಜಿತ್ ಗೆ ಕರೆ ಮಾಡಿದ್ದಾಳೆ. ಆದರೆ, ಆತ ಕರೆ ಸ್ವೀಕರಿಸಿಲ್ಲ. ಇಬ್ಬರ ನಡುವೆ ನಡೆದಿರುವ ಸಂಭಾಷಣೆಯಲ್ಲಿ ಸೌಮ್ಯಜಿತ್ ನನ್ನ ಜೀವನದಿಂದ ಆಚೆ ಹೋಗುವಂತೆ ಹೇಳಿದ್ದಾರೆ.ಸದ್ಯ ಪ್ರಕರಣವು ನಾನಾ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ಬೆನ್ನಲ್ಲೇ ಸೌಮ್ಯಜಿತ್ ನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.
PublicNext
25/08/2022 07:26 pm