ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶರಣರ ಮೇಲೆ ಪೋಕ್ಸೋ ಕೇಸ್

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ‌.

ಮಠದ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಹಲವು ದಿನಗಳಿಂದ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆಂಬ ಅಂಶ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಇಲ್ಲಿ ನಮಗೆ ನ್ಯಾಯ ಸಿಗಲಾರದು ಎಂಬ ಆತಂಕದಿಂದ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ 'ಒಡನಾಡಿ' ಸಂಸ್ಥೆಯನ್ನು ಸಂಪರ್ಕಿಸಿದ್ದಾರೆ‌. ಈಗ ವಿದ್ಯಾರ್ಥಿನಿಯರ ಪರವಾಗಿ ಒಡನಾಡಿ ಸಂಸ್ಥೆಯು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಗಮನಕಗೆ ತಂದಿದೆ. ಆಗ ಈ ಬಗ್ಗೆ ಸಮಿತಿಯು ವಿಚಾರಣೆ ಆರಂಭಿಸಿದೆ.

ಮಕ್ಕಳ ಹೇಳಿಕೆ ಆಧಾರದಲ್ಲಿ ಸಮಿತಿಯು ನಜರಾಬಾದ್ ಠಾಣೆಗೆ ದೂರು ನೀಡಿದೆ. ಆರಂಭದಲ್ಲಿ ನಜರಾಬಾದ್ ಠಾಣೆ ಪೊಲೀಸರು ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಪ್ರಕರಣ ದಾಖಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರಿನನ್ವಯ ನಜರಾಬಾದ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಎಫ್‌ಐಆರ್ ದಾಖಲಾಗಿದೆ. ಹಾಗೂ ಈ ಬಗ್ಗೆ ತನಿಖೆ ಕೈಗೆಗೆತ್ತಿಕೊಂಡಿದ್ದೇವೆ ಎಂದು ಮೈಸೂರು ಡಿಸಿಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

27/08/2022 10:45 am

Cinque Terre

62 K

Cinque Terre

19

ಸಂಬಂಧಿತ ಸುದ್ದಿ