ತುಮಕೂರು; ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನ ಗುಪ್ತಾಂಗವನ್ನು ಸುಟ್ಟಿರುವ ಅಮಾನವೀಯ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಚಡ್ಡಿಯಲ್ಲಿ ಮೂತ್ರ ವಿಸರ್ಜಿಸುತ್ತಿದ್ದ ಬಾಲಕನನ್ನು ಭಯಪಡಿಸಲು ಅಂಗನವಾಡಿ ಶಿಕ್ಷಕಿ, ಸಹಾಯಕಿ ಸೇರಿ ಬಾಲಕನ ತೊಡೆ ಹಾಗೂ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಶಿಕ್ಷಕಿ, ಸಹಾಯಕಿ ಮತ್ತು ಬಾಲಕನ ಪೋಷಕರ ಹೇಳಿಕೆ ಪಡೆದಿದ್ದಾರೆ. ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಗೆ ತಾಲ್ಲೂಕು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು
ನೋಟಿಸ್ ನೀಡಿದ್ದಾರೆ.
PublicNext
30/08/2022 05:49 pm