ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮವಾಗಿ ಕಂತೆ ಕಂತೆ ಹಣ ಸಾಗಾಟ; ಜೀವದ ಹಂಗು ತೊರೆದು ವಶಕ್ಕೆ ಪಡೆದ ಖಾಕಿ

ಹಾವೇರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಹಾವೇರಿ ಜಿಲ್ಲೆ ಹಾನಗಲ್‌ ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜ್‌ಖಾನ್ (31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ನನ್ನು ಪೊಲೀರು ಬಂಧಿಸಿದ್ದಾರೆ. ಇವರು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಅಕ್ರಮವಾಗಿ ಹಣ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಎಸ್‌ಪಿ ಹನುಮಂತರಾಯ ಅವರು ಮಾಹಿತಿ ನೀಡುತ್ತಿದ್ದಂತೆ ಹಾನಗಲ್ ಸಿಪಿಐ ಶಿವಶಂಕರ್ ಗಣಾಚಾರಿ ಹಾಗೂ ಪಿಎಸ್‌ಐ ಶ್ರೀಶೈಲ ಪಟ್ಟಣ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.

ಖದೀಮರು ಪೊಲೀಸರನ್ನು ಕಂಡು ಕಾರನ್ನು ಸ್ಪೀಡ್ ಆಗಿ ಓಡಿಸಿದ್ದಾರೆ. ಬಳಿಕ ಕಾರ್ ಹಿಂದೆ ಓಡಿ ಹೋಗಿ ಕೆಳಕ್ಕೆ ಬಿದ್ದರೂ ಅವರನ್ನು ಬಿಡದೇ ಪೊಲೀಸರು ಚೇಜ್ ಮಾಡಿ, ಕಾರನ್ನು ನಿಲ್ಲಿಸಿದ್ದಾರೆ. ಬಳಿಕ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಇಡಲಾಗಿದ್ದ ಬ್ಯಾಗ್‌ನಲ್ಲಿದ್ದ 500, 200, 100 ಹಾಗೂ 50 ರೂ. ಮುಖಬೆಲೆಯ ಒಟ್ಟು 85 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಮಾಡಿದ್ದಾರೆ.

Edited By : Vijay Kumar
PublicNext

PublicNext

31/08/2022 10:41 am

Cinque Terre

30.49 K

Cinque Terre

2

ಸಂಬಂಧಿತ ಸುದ್ದಿ