ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ವೈದ್ಯರನ್ನ ಹಿಗ್ಗಾಮುಗ್ಗಾ ಥಳಿಸಿದ ರೋಗಿಯ ಸಂಬಂಧಿಕರು

ಲಕ್ನೋ: ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರ ಮೇಲೆ ರೋಗಿಯ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.

ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ವೈದ್ಯರಿಗೆ ಸಂಬಂಧಿಕರು ಥಳಿಸಿದ್ದಾರೆ. ಈ ಘಟನೆಯ ದೃಶ್ಯವು ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಹಲ್ಲೆಯ ದೃಶ್ಯವು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವರದಿಗಳ ಪ್ರಕಾರ, ಈ ಘಟನೆ ಆಗಸ್ಟ್ 28ರಂದು ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ವೈದ್ಯರ ಮೇಲೆ ಕೋಪಗೊಂಡ ರೋಗಿಯ ಕೆಲ ಸಂಬಂಧಿಕರು ಆಸ್ಪತ್ರೆಯೊಳಗೆ ಜಮಾಯಿಸಿದ್ದು, ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರೆ ಜನರು ಮಧ್ಯಪ್ರವೇಶಿಸಿ ವೈದ್ಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಳಕಿಗೆ ಬಂದ ನಂತರ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Edited By : Shivu K
PublicNext

PublicNext

31/08/2022 07:38 pm

Cinque Terre

47.47 K

Cinque Terre

1

ಸಂಬಂಧಿತ ಸುದ್ದಿ