ದಾವಣಗೆರೆ: ಹೊನ್ನಾಳಿಯಲ್ಲಿ ಹಿಂದೂ ಮಹಾ ಗೌರಿ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಹಾಕಲಾಗಿದ್ದ ಫ್ಲೆಕ್ಸ್ ಗಳಿಗೆ ಬ್ಲೆಡ್ ಹಾಕಿ ದುಷ್ಕರ್ಮಿಗಳು ಹರಿದು ಹಾಕಿರುವ ಘಟನೆ ನಡೆದಿದೆ.
ಹೊನ್ನಾಳಿ ಪಟ್ಟಣ ಹಾಗೂ ಗೊಲ್ಲರಹಳ್ಳಿಯಿಂದ ಹೊನ್ನಾಳಿ ಮಾರ್ಗವಾಗಿ ಹಾಕಲಾಗಿದ್ದ ಫ್ಲಕ್ಸ್ ಗಳಿಗೆ ಹಾನಿ ಮಾಡಲಾಗಿದೆ. ಫ್ಲೆಕ್ಸ್ ಗಳಲ್ಲಿ ವೀರ ಸಾವರ್ಕರ್ ಹಾಗೂ ಶಾಸಕ ರೇಣುಕಾಚಾರ್ಯ ಅವರ ಭಾವಚಿತ್ರಗಳಿಗೆ ದುಷ್ಕರ್ಮಿಗಳು ಬ್ಲೆಡ್ ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಬಾರಿಯೂ ಹೊನ್ನಾಳಿಯಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೊನ್ನಾಳಿ ಪಟ್ಟಣದಾದ್ಯಂತ ಸಾವರ್ಕರ್, ಬಾಲಗಂಗಾಧರ ತಿಲಕ್, ಸಂಗೊಳ್ಳಿ ರಾಯಣ್ಣ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು.
PublicNext
01/09/2022 09:03 am