ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇದೀಗ ಪೊಲೀಸರು ಮುರುಘಾಶ್ರೀಗಳಿಗೆ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಈ ಸಂಬಂಧ ಮುರುಘಾ ಶ್ರೀಗಳಿಗೆ ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಡಿವೈಎಸ್ಪಿ ಅನಿಲ್ ಅವರು, ಲುಕ್ ಔಟ್ ನೋಟಿಸ್ ಅನ್ನು ಜಾರಿಗೊಳಿಸಿದ್ದಾರೆ. ಮತ್ತೊಂದೆಡೆ ಮುರುಘಾ ಶರಣರು ಆಗಸ್ಟ್ 29ರಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿಯೇ ಅವರಿಗೆ ಈಗ ಡಿವೈಎಸ್ಪಿ ಅನಿಲ್ ಅವರು ಲುಕ್ಔಟ್ ನೋಟಿಸ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ.
PublicNext
01/09/2022 08:14 pm