ಉತ್ತರಕನ್ನಡ: ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಡಸೆಯಲ್ಲಿ ಅನಧಿಕೃತವಾಗಿ ದಾಸ್ತಾನು ಇಡಲಾಗಿದ್ದ ಸಿಲಿಂಡರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕೊಡಸೆಯಲ್ಲಿ ಮೌಲಾಲಿ ಫಕೀರಸಾಬ್ ಎಂಬವರ ಅತಿಕ್ರಮಣ ಜಾಗದಲ್ಲಿರುವ ಮನೆಯ ಪಕ್ಕ ಅನಧಿಕೃತವಾಗಿ, ಅಸುರಕ್ಷಿತವಾಗಿ 30 ಸಿಲಿಂಡರ್ ಗಳನ್ನು ದಾಸ್ತಾನು ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಸಿಲಿಂಡರ್ ಗಳನ್ನು ವಶಕ್ಕೆ ಪಡೆದಿದ್ದಾರೆ.ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಗ್ರೇಡ್ 2 ತಹಶೀಲ್ದಾರ್ ಸಿ.ಜಿ.ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ರು.
PublicNext
03/09/2022 02:49 pm