ಮಾಗಡಿ : ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮಾಗಡಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಅವರ ಪತ್ನಿ ರೂಪಾ(38) ಅವರ ಮಕ್ಕಳಾದ 6 ವರ್ಷದ ಹರ್ಷಿತ ಮತ್ತು 4 ವರ್ಷದ ಸ್ಪೂರ್ತಿ ಎಂದು ತಿಳಿದು ಬಂದಿದೆ.
ಹೊಸಪಾಳ್ಯ ಗ್ರಾಮದ ತಮ್ಮ ಜಮೀನಿನ ಬಳಿ ಮೊದಲು ಮಕ್ಕಳಿಗೆ ವಿಷವುಣಿಸಿ ನಂತರ ತಾನು ವಿಷ ಸೇವಿಸಿ ಧಾರುಣವಾಗಿ ಮೃತರಾಗಿದ್ದಾರೆ. ಇನ್ನು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಗೆ ಸಂಭಂದಿಸಿದಂತೆ ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯಲೋಕೇಶ್ ಹಾಗೂ ಗ್ರಾಮಸ್ಥರು ಏನು ಮಾತನಾಡುತ್ತಿಲ್ಲ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಶವಗಳನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
-ಎಲ್.ಜಿ.ಜಯರಾಮನಾಯಕ್ ಪಬ್ಲಿಕ್ ನೆಕ್ಸ್ಟ್ ಕನಕಪುರ
PublicNext
04/09/2022 10:43 am